ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಟಿಪ್ಪರ್ ಲಾರಿಗೆ ಹಿಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್‌ಟಿಸಿ) ಬಸ್ ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ತೀವ್ರ ಗಾಯಗೊಂಡ ಘಟನೆ ಸಮೀಪದ ಹಾರುವನಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಮಂಗಳವಾರ ರಾತ್ರಿ ನೆಡೆದಿದೆ.
ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಭಟಪನಹಳ್ಳಿ ಗ್ರಾಮದ ನಿರ್ವಾಹಕ ಉಮೇಶ್ ಮರಿಯಪ್ಪ ಹಾದಿಮನಿ (41) ಮೃತರು. ಅದೇ ತಾಲ್ಲೂಕಿನ ಅಡೂರು ಗ್ರಾಮದ ಚಾಲಕ ಮಬೂಸಾಬ್ ತೀವ್ರವಾಗಿ ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕುಕನೂರನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾರುವನಹಳ್ಳಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಟಿಪ್ಪರ್ ಯಾವುದೇ ಸಿಗ್ನಲ್ ತೋರಿಸದೆ ಎಕಾಎಕಿ ಬಲಬದಿಗೆ ಯೂ ಟರ್ನ್ ತೆಗೆದುಕೊಂಡಾಗ ಹಿಂದಿನಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ಕಂಡಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದರು. ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.