ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ‘ನಾನು ಸಹ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ’ ಎಂದು ಮಾಜಿ ಅಧ್ಯಕ್ಷ ಎಲ್.ಬಿ.ಪಿ.ಭೀಮಾ ನಾಯ್ಕ್ ಹೇಳುವ ಮೂಲಕ ಡಿ.ಕೆ.ಸುರೇಶ್ ಅವರಿಗೆ ನೇರ ಸ್ಪರ್ಧೆ ಒಡ್ಡುವ ಸುಳಿವು ನೀಡಿದ್ದಾರೆ.
ಇಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ರಾಯಚೂರು ಬಳ್ಳಾರಿ ಕೊಪ್ಪಳ ವಿಜಯನಗರ (ರಾಬಕೊವಿ) ಹಾಲು ಒಕ್ಕೂಟದ ಚುನಾವಣೆಯಲ್ಲಿ ನಾನು ಸಹ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲಿದ್ದೇನೆ. ಧಾರವಾಡ ಹೈಕೋರ್ಟ್ ಪೀಠ ಚುನಾವಣೆಗೆ ಇದ್ದ ತಡೆಯನ್ನು ತೆರವುಗೊಳಿಸಿದ ಕಾರಣ ಜುಲೈ 10ರಂದು ಈ ಚುನಾವಣೆ ನಡೆಯಲಿದೆ’ ಎಂದರು.
‘ಬಳ್ಳಾರಿಯಿಂದ ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ. ಆದರೆ ಇದರ ಬಗ್ದೆ ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ’ ಎಂದು ಅವರು ಹೇಳಿದರು.
ಸಿರಾಜ್ ಅನ್ನು ಒಪ್ಪಿಲ್ಲ: ವಿಜಯನಗರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರನ್ನು ನಾನು ಒಪ್ಪಿಕೊಂಡೇ ಇಲ್ಲ. ಅವರು ಯಾರು? ಪಕ್ಷ ವಿರೋಧಿ ಚಟುವಟಿಕೆ ನಡೆಸುವ ಅವರಿಗೆ ನಾನು ಮಾಧ್ಯಮದ ಮುಂದೆ ಹೋಗಬಾರದು ಎಂದು ಹೇಳುವ ಯಾವುದೇ ನೈತಿಕತೆ ಇಲ್ಲ’ ಎಂದು ಭೀಮಾ ನಾಯ್ಕ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.