ಕೊಟ್ಟೂರು (ವಿಜಯನಗರ ಜಿಲ್ಲೆ): ಕೊಟ್ಟೂರಿನಲ್ಲಿ ಕುತೂಹಲ ಮೂಡಿಸಿದ್ದ ತ್ರಿವಳಿ ಕೊಲೆ ಪ್ರಕರಣ ಕೊನೆಗೂ ಶನಿವಾರ ಮಧ್ಯಾಹ್ನದ ವೇಳೆಗೆ ಬಯಲಾಗಿದ್ದು, ಆರೋಪಿ ತನ್ನ ಮನೆಯಲ್ಲೇ ತೋಡಿದ ಒಂದೇ ಗುಂಡಿಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.
ಮನೆಯಲ್ಲಿ ನಾಲ್ಕಡಿ ಆಳದ ಗುಂಡಿ ತೋಡಿದ ಆರೋಪಿ ಅಕ್ಷಯ್ ಕುಮಾರ್, ಮೊದಲಿಗೆ ತಾಯಿಯ ಮೃತದೇಹ, ಅದರ ಮೇಲೆ ತಂಗಿಯ ಮೃತದೇಹ ಹಾಗೂ ಕೊನೆಯಲ್ಲಿ ತಂದೆಯ ಮೃತದೇಹವನ್ನು ಹಾಕಿ ಟೈಲ್ಸ್‌ನಿಂದ ಮುಚ್ಚಿರುವುದು ತನಿಖೆಯ ವೇಳೆ ಗೊತ್ತಾಗಿದೆ.
ಆರೋಪಿತನನ್ನು ಶನಿವಾರ ಬೆಂಗಳೂರಿನಿಂದ ಕರೆದುಕೊಂಡು ಬಂದ ನಂತರ ಉಪವಿಭಾಗಾಧಿಕಾರಿ ಹಾಗೂ ಎಸ್‌ಪಿ ಎಸ್.ಜಾಹ್ನವಿ ಅವರ ಸಮಕ್ಷಮದಲ್ಲಿ ಮಹಜರು ಮಾಡಿದ ನಂತರ ಮನೆಯೊಳಗೆ ಹೂತಿಟ್ಟ ಮೂರು ಶವಗಳು ದೊರೆತಿದ್ದು, ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸುವ ಕಾರ್ಯ ನಡೆಯಿತು.
ಘಟನಾ ಸ್ಥಳ ಹಾಗೂ ಆಸ್ಪತ್ರೆ ಆವರಣದಲ್ಲಿ ಸೇರಿರುವ ಅಪಾರ ಸಂಖ್ಯೆಯ ಜನಸ್ತೋಮ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.