ADVERTISEMENT

ಕೂಡ್ಲಿಗಿ | ಪರಿಹಾರ ವಿಳಂಬ: ಎರಡು ಬಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 5:31 IST
Last Updated 15 ಜನವರಿ 2026, 5:31 IST
ಕೊಪ್ಪಳ ಘಟಕದ ಬಸ್ ಒಂದನ್ನು ಜಪ್ತಿ ಮಾಡಿ ಕೂಡ್ಲಿಗಿ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಯಿತು
ಕೊಪ್ಪಳ ಘಟಕದ ಬಸ್ ಒಂದನ್ನು ಜಪ್ತಿ ಮಾಡಿ ಕೂಡ್ಲಿಗಿ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಯಿತು   

ಕೂಡ್ಲಿಗಿ: ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಪರಿಹಾರ ಪಾವತಿಸದ ಹಿನ್ನೆಲೆಯಲ್ಲಿ ಸ್ಥಳೀಯ ಹಿರಿಯ ಸಿವಿಲ್ ನ್ಯಾಯಾಲಯದ ಆದೇಶದಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳನ್ನು ಬುಧವಾರ ಜಪ್ತಿ ಮಾಡಲಾಗಿದೆ.

ಕೊಪ್ಪಳ ಘಟಕಕ್ಕೆ ಸೇರಿದ ಬಸ್ ಅಪಘಾಯದಲ್ಲಿ ಕೂಡ್ಲಿಗಿ ತಾಲ್ಲೂಕಿನ ಹೊಸಹಳ್ಳಿ ಬಳಿ ಬಿ. ನಾಗರಾಜ ಮೃತಪಟ್ಟಿದ್ದರು. ಹೈಕೋರ್ಟ್ ಆದೇಶದಂತೆ ಪರಿಹಾರ ಮೊತ್ತವನ್ನು ಸಕಾಲದಲ್ಲಿ ಪಾವತಿ ಮಾಡದ ಕಾರಣ ಬಸ್ ಜಪ್ತಿ ಮಾಡಿ ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಯಿತು.

ಮತ್ತೊಂದು ಪ್ರಕರಣದಲ್ಲಿ ಹೊಸಪೇಟೆ ಡಿಪೊಗೆ ಸೇರಿದ ಬಸ್ಸನ್ನು ಜಪ್ತಿ ಮಾಡಿ ನ್ಯಾಯಾಲಯದ ಆವರಣಕ್ಕೆ ತರಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.