ADVERTISEMENT

14ನೇ ದಿನಕ್ಕೆ ಸಾರಿಗೆ ಮುಷ್ಕರ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 13:48 IST
Last Updated 20 ಏಪ್ರಿಲ್ 2021, 13:48 IST

ಹೊಸಪೇಟೆ (ವಿಜಯನಗರ): ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಮಂಗಳವಾರ 14ನೇ ದಿನಕ್ಕೆ ಕಾಲಿರಿಸಿತು.

ಇಷ್ಟು ದಿನ ನಗರದ ಕೇಂದ್ರ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗಳೇ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುತ್ತಿದ್ದವು. ಈಗ ಸಾರಿಗೆ ಸಂಸ್ಥೆಯ ಬಸ್‌ಗಳ ಸಂಖ್ಯೆಯೂ ಹೆಚ್ಚಾಗಿದೆ. ಬಸ್‌ಗಳ ಸಂಖ್ಯೆ ಹೆಚ್ಚಿರುವುದರಿಂದ ಸೋಮವಾರ ಖಾಸಗಿ ವಾಹನಗಳನ್ನು ನಿಲ್ದಾಣದೊಳಗೆ ಬಿಡಲು ಅಲ್ಲಿನ ಸಿಬ್ಬಂದಿ ಅವಕಾಶ ಕಲ್ಪಿಸಿರಲಿಲ್ಲ. ಇದರಿಂದಾಗಿ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿತ್ತು.

ಆದರೆ, ಮಂಗಳವಾರ ನಿಲ್ದಾಣದ ಒಂದು ಬದಿಯಿಂದ ಸಾರಿಗೆ ಸಂಸ್ಥೆಯ ಬಸ್‌ಗಳು ಸಂಚರಿಸಿದರೆ, ಇನ್ನೊಂದು ಭಾಗದಿಂದ ಖಾಸಗಿ ಬಸ್‌, ಮ್ಯಾಕ್ಸಿಕ್ಯಾಬ್‌ ಸಂಚರಿಸಿದವು. ಆದರೆ, ಜನರ ಓಡಾಟ ಹೆಚ್ಚಿಗೆ ಇರಲಿಲ್ಲ. ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಜನ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.