ADVERTISEMENT

ಕೂಡ್ಲಿಗಿ: ಕೆರೆಯಲ್ಲಿ ಮುಳುಗಿ ಇಬ್ಬರು ಮಹಿಳೆಯರ ಸಾವು

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2026, 12:47 IST
Last Updated 28 ಫೆಬ್ರುವರಿ 2026, 12:47 IST
   

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಗಂಡಬೊನ್ನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಹಿಳೆಯರು ನೀರಿನಲ್ಲಿ ಮುಳುಗಿ ಮೃತಪಟ್ಟು, ನಾಲ್ವರು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ.

ಸರೋಜಮ್ಮ(35) ಸುಜಾತ( 28) ಮೃತಪಟ್ಟವರು.

ತಾಲ್ಲೂಕಿನ ಗುಡೇಕೋಟೆಯಲ್ಲಿ ನಡೆದಿದ್ದ ಕೋಡಿ ದುರುಗಮ್ಮ ಜಾತ್ರೆಗೆಂದು ಬಂದಿದ್ದ ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನ ಗಂಡಬೊನ್ನಹಳ್ಳಿ ಕೆರೆ ಬಳಿ ಹೋಗಿ ಮಧ್ಯಾಹ್ನ ಊಟ ಮಾಡಿಕೊಂಡು ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ಸದೋಜಮ್ಮ ಹಾಗೂ ಸುಜಾತ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದಂತೆ ಶ್ರಾವಣ, ಭೂಮಿಕ, ಅನಿತ, ಸಂಗೀತಾ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗುಡೇಕೋಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.