ADVERTISEMENT

ಕುರುಬ ಸಮುದಾಯಕ್ಕೆ ಎಸ್ಟಿ ಪ್ರಸ್ತಾವಕ್ಕೆ ವಿರೋಧ: ಸರ್ಕಾರಕ್ಕೆ 10 ದಿನದ ಗಡುವು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 7:38 IST
Last Updated 25 ಸೆಪ್ಟೆಂಬರ್ 2025, 7:38 IST
   

ಹೊಸಪೇಟೆ (ವಿಜಯನಗರ): ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವವನ್ನು 10 ದಿನದೊಳಗೆ ಕೈಬಿಡಬೇಕು, ತಪ್ಪಿದಲ್ಲಿ ಹೊಸಪೇಟೆ ಬಂದ್ ಸಹಿತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡುವುದರೊಂದಿಗೆ ಇಲ್ಲಿ ಗುರುವಾರ ನಡೆದ ಪ್ರತಿಭಟನೆ ಕೊನೆಗೊಂಡಿತು.

ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡರು. ಕಪ್ಪು ಬಟ್ಟೆ, ಶಾಲು ತೊಟ್ಟಿದ್ದ ಪ್ರತಿಭಟನಕಾರರು ಸುಮಾರು ಒಂದು ಕಿಲೋಮೀಟರ್‌ನಷ್ಟು ದೂರಕ್ಕೆ ಪಾದಯಾತ್ರೆ ನಡೆಸಿ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಸಮಾವೇಶಗೊಂಡರು. ಕೊನೆಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಜಂಬಯ್ಯ ನಾಯಕ ಮಾತನಾಡಿ, ಗಡುವಿನೊಳಗೆ ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಪ್ರತಿಭಟನೆ ನಿಶ್ಚಿತ ಎಂದರು.

ADVERTISEMENT

ಮುಖಂಡರಾದ ಗೋಸಲ ಭರಮಪ್ಪ, ಕಿನ್ನಾಳ್ ಹನುಮಂತ, ದೇವರಮನಿ ಶ್ರೀನಿವಾಸ, ಗುಡಿಗುಡಿ ಸೋಮನಾಥ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.