ADVERTISEMENT

ಹೊಸಪೇಟೆ| ಕಾರ್ಮಿಕ ಸಂಹಿತೆ ಅಪಾಯಕಾರಿ, ವಿರೋಧಿಸಿ: ಮೀನಾಕ್ಷಿ ಸುಂದರಂ

ಐದು ಜಿಲ್ಲೆಗಳ ವ್ಯಾಪ್ತಿಯ ಸಿಐಟಿಯು ವಿಭಾಗೀಯ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 2:05 IST
Last Updated 10 ಜನವರಿ 2026, 2:05 IST
<div class="paragraphs"><p>ಹೊಸಪೇಟೆಯಲ್ಲಿ ಶುಕ್ರವಾರ ಸಿಐಟಿಯು ವತಿಯಿಂದ ನಡೆದ ಐದು ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಮೀನಾಕ್ಷಿ ಸುಂದರಂ ಮಾತನಾಡಿದರು&nbsp;</p></div>

ಹೊಸಪೇಟೆಯಲ್ಲಿ ಶುಕ್ರವಾರ ಸಿಐಟಿಯು ವತಿಯಿಂದ ನಡೆದ ಐದು ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಮೀನಾಕ್ಷಿ ಸುಂದರಂ ಮಾತನಾಡಿದರು 

   

ಪ್ರಜಾವಾಣಿ ಚಿತ್ರ

ಹೊಸಪೇಟೆ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನಾಲ್ಕು ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆಗಳು ತುಂಬಾ ಅಪಾಯಕಾರಿಯಾಗಿದ್ದು, ಅದನ್ನು ಒಗ್ಗಟ್ಟಿನಿಂದ ವಿರೋಧಿಸುವ ಅಗತ್ಯವಿದೆ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷ ಮೀನಾಕ್ಷಿ ಸುಂದರಂ ಹೇಳಿದರು.

ADVERTISEMENT

ಇಲ್ಲಿ ಶುಕ್ರವಾರ ನಡೆದ ವಿಜಯನಗರ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಈ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಪಾಲಿಗೆ ಮರಣ ಶಾಸನಗಳಾಗಿವೆ, ಇದರ ಕರಾಳ ಮುಖದ ಬಗ್ಗೆ ತಿಳಿವಳಿಕೆ ಮಾಡಿಕೊಳ್ಳುವ ಅಗತ್ಯ ಇದೆ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಹೋರಾಟದ ಭಾಗವಾಗಿ ಬಂದಿರುವ ಕಾನೂನು ಭಾರತ ಸಂವಿಧಾನದ ಅಡಿಯಲ್ಲಿ ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಮರ್ಥವಾಗಿದೆ. ಇಂತಹ ರಕ್ಷಣೆಯ ಕಾನೂನುಗಳನ್ನೇ ತೆಗೆದುಹಾಕಿ ವಿದೇಶಿ ಮತ್ತು ದೇಶೀಯ ಬೃಹತ್ ಬಂಡವಾಳ ಹೂಡಿಕೆದಾರರ ಅಣತಿಯಂತೆ ಕೆಲಸ ಮಾಡಲು ಕೇಂದ್ರ ಸರ್ಕಾರ ಮುಂದಾದೆ. ಇದನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಮತ್ತು ಕಿಸಾನ್‌ ಮೋರ್ಚಾಗಳು ಫೆ.12ರಂದು ಭಾರತ ಬಂದ್‌ಗೆ ಮಾದರಿಯಲ್ಲಿ ಹೋರಾಟ ನಡೆಸಲಿವೆ ಎಂದು ಹೇಳಿದರು.

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿದ ಏಕೈಕ ರಾಜ್ಯ ಎಂದರೆ ಕೇರಳ. ಕರ್ನಾಟಕ ಸರ್ಕಾರ ಇಲ್ಲಿಯವರೆಗೆ ಈ ಕಾನೂನುಗಳ ಬಗ್ಗೆ  ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸದೆ ತಟಸ್ಥ ನಿಲುವನ್ನು ತಳೆದಿರುವುದು ಅಚ್ಚರಿಯ ಸಂಗತಿ ಎಂದು ಮೀನಾಕ್ಷಿ ಸುಂದರಂ ಹೇಳಿದರು.

ರಾಜ್ಯ ಸರ್ಕಾರ ಇನ್ನಾದರೂ ಈ ಕರಾಳ ಕಾನೂನುಗಳ ಬಗ್ಗೆ ಗಮನ ಹರಿಸಬೇಕು, ಕಾರ್ಮಿಕರು ತಮ್ಮ ಉಗ್ರ ಸ್ವರೂಪದ ಹೋರಾಟದ ಮೂಲಕ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯ ಉಪಾಧ್ಯಕ್ಷರಾದ ಆರ್.ಎನ್.ಬಸವರಾಜ, ಸತ್ಯ ಬಾಬು, ಕಾರ್ಯದರ್ಶಿಗಳಾದ ಎಲ್.ಮಂಜುನಾಥ, ಆನಂದರಾಜು, ನಿರುಪಾದಿ ಬೆಣಕಲ್, ಜಿಲ್ಲಾ ಸಂಚಾಲಕರಾದ ಕೆ.ಎಂ.ಸ್ವಪ್ನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.