ADVERTISEMENT

91 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್: ಸಂತೋಷ ಲಾಡ್

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 14:04 IST
Last Updated 4 ಜುಲೈ 2025, 14:04 IST
<div class="paragraphs"><p>ಹೊಸಪೇಟೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪರಿಹಾರ ಧನದ ಚೆಕ್ ಸಾಂಕೇತಿಕವಾಗಿ ವಿತರಿಸಿದರು.&nbsp;&nbsp;</p></div>

ಹೊಸಪೇಟೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಪರಿಹಾರ ಧನದ ಚೆಕ್ ಸಾಂಕೇತಿಕವಾಗಿ ವಿತರಿಸಿದರು.  

   

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿನ ವಿವಿಧ 91 ವರ್ಗಗಳ 35 ಲಕ್ಷ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ, ಉಚಿತವಾಗಿ ನೋಂದಾಯಿಸಿ ವಿವಿಧ ಸೌಲಭ್ಯಗಳು ಒಳಗೊಂಡ ಸ್ಮಾರ್ಟ್ ಕಾರ್ಡ್ ವಿತರಿಸುವ
‘ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ’ ಕಾರ್ಯಕ್ರಮ ಹೊಸಪೇಟೆಯಲ್ಲಿ ಶುಕ್ರವಾರ ನಡೆಯಿತು.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಚಾಲಕರ ಕುಟುಂಬದವರಿಗೆ ತಲಾ ₹ 5 ಲಕ್ಷ ಪರಿಹಾರ ಚೆಕ್ ಮತ್ತು ಇತರ ಕಾರ್ಮಿಕರಿಗೆ ಸಾಂಕೇತಿಕವಾಗಿ ಸ್ಮಾರ್ಟ್‌ ಕಾರ್ಡ್‌ನ್ನು ಸಂತೋಷ ಲಾಡ್ ವಿತರಿಸಿದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಆರಂಭಿಕ ಹಂತದಲ್ಲಿ ಯೋಜನೆಗೆ 26 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿತ್ತು. ನಂತರದ ದಿನಗಳಲ್ಲಿ ಹೊಸದಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ 38 ವರ್ಗಗಳನ್ನು ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ 27 ವರ್ಗಗಳ ಕಾರ್ಮಿಕರನ್ನು ಸೇರಿಸಿಕೊಳ್ಳಲಾಯಿತು.  ಸಹಾಯವಾಣಿ ಸಂಖ್ಯೆ 155214ಕ್ಕೆ ಕರೆ ಮಾಡಿದರೆ ಸೂಕ್ತ ಮಾಹಿತಿ ಸಿಗುತ್ತದೆ’ ಎಂದರು.

‘ಜಿಡಿಪಿ ಬಗ್ಗೆ ಕೇಂದ್ರ ಸರ್ಕಾರವು ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿದೆ. ಜನಸಂಖ್ಯೆ ಇರುವ ಕಡೆ ಜಿಡಿಪಿ ಬೆಳವಣಿಗೆ ದೊಡ್ಡ ವಿಷಯವಲ್ಲ. ಆದರೆ, ತಲಾ ಆದಾಯ ಹೆಚ್ಚಬೇಕು. ಅದರ ಬಗ್ಗೆ ಬಿಜೆಪಿಯವರು ಮಾತನಾಡುವುದೇ ಇಲ್ಲ’ ಎಂದರು.

ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯಗಳ ಸಹಿತ ಸ್ಮಾರ್ಟ್‌ ಕಾರ್ಡ್‌ ವಿತರಿಸುವ ಯೋಜನೆ ದೇಶದಲ್ಲೇ ಮೊದಲು. ಜನರ ಹಣವನ್ನು ಜನರಿಗೆ ನೀಡಬೇಕು ಎಂಬುದು ರಾಜ್ಯ ಸರ್ಕಾರದ ನೀತಿ
ಸಂತೋಷ ಲಾಡ್ ಕಾರ್ಮಿಕ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.