
ಪ್ರಜಾವಾಣಿ ವಾರ್ತೆಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ಮನರೇಗಾದಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗುರುಮೂರ್ತಿ ಮೂಗನಗೌಡ್ರು(52) ಅವರು ಗುರುವಾರ ಬೆಳಿಗ್ಗೆ 7.40ಕ್ಕೆ ಹಠಾತ್ ಕುಸಿದು ಬಿದ್ದು ಮೃತಪಟ್ಟರು.
ಅವರಿಗೆ ಮೃತರು ಪತ್ನಿ ಎಂ.ಸಾವಿತ್ರಮ್ಮ, ಇಬ್ಬರು ಪುತ್ರರು ಇದ್ದಾರೆ.
ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮನರೇಗಾ ಸಹಾಯಕ ನಿರ್ದೇಶಕ ಯು.ಎಚ್.ಸೋಮಶೇಖರ್, ಪಿಡಿಒ ಷಣ್ಮುಖಪ್ಪ, ನರೇಗಾ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.