ADVERTISEMENT

ಹಂಪಿ‌ ಪವರ್ ಹೌಸ್ ನಲ್ಲಿ‌ ಚಿರತೆ ಪ್ರತ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2023, 4:13 IST
Last Updated 12 ಮಾರ್ಚ್ 2023, 4:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಕಮಲಾಪುರದ ಹಂಪಿ ಪವರ್ ಹೌಸ್ ನಲ್ಲಿ (ಎಚ್.ಪಿ.ಸಿ) ಭಾನುವಾರ ಚಿರತೆ ಕಾಣಿಸಿಕೊಂಡಿದ್ದು, ಜನ ಭಯಭೀತರಾಗಿದ್ದಾರೆ.


ಬುಧವಾರವೂ ಇದೇ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ರಾತ್ರಿ ವೇಳೆ ಗದ್ದೆಗಳಿಗೆ ಹೋಗಲು ಜನ ಹೆದರುತ್ತಿದ್ದಾರೆ. ಅರಣ್ಯ ಇಲಾಖೆಯವರು ಬೋನು ಇರಿಸಿ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT