ಕೊಟ್ಟೂರು: ತಾಲ್ಲೂಕಿನ ದೂಪದಹಳ್ಳಿ ಗ್ರಾಮದ ಬಳಿ ಬುಧವಾರ ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಲೈನ್‌ಮನ್ ಮೃತಪಟ್ಟಿದ್ದಾರೆ.
ಗಜಾಪುರ ಕೊಟ್ರೇಶ (28) ಮೃತರು.
ಗ್ರಾಮದಲ್ಲಿ ವಿದ್ಯುತ್ ಪರಿವರ್ತಕದ ಕೆಲಸ ನಿರ್ವಹಿಸಲಾಗಿತ್ತು. ಬಳಿಕ ವಿದ್ಯುತ್ ಚಾರ್ಜ್ ಮಾಡಲು ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿದೆ.
ಜೆಸ್ಕಾಂ ಎಇಇ ಹಾಗೂ ಜೆಇ, ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.