ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಸಮೀಕ್ಷೆಗೆ ಮುಂದಾಗಿದೆ, ಲಿಂಗಾಯತ ಸಮುದಾಯದವರು 1999ಕ್ಕಿಂತ ಮೊದಲು ತಮ್ಮ ಜಾತಿ ಪ್ರಮಾಣಪತ್ರದಲ್ಲಿ ಎನಿತ್ತೋ ಅದನ್ನೇ ನಮೂದಿಸಬೇಕು ಎಂದು ಚಿಕ್ಕಮಗಳೂರು ಬಸವತತ್ವ ಪೀಠದ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಇಲ್ಲಿ ಭಾನುವಾರ ಸಂಜೆ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಈ ವಿಷಯ ತಿಳಿಸಿದರಲ್ಲದೆ, ಧರ್ಮ ಕಾಲಂನಲ್ಲಿ ಲಿಂಗಾಯತ ಎಂದೇ ಬರೆಯಬೇಕು ಎಂದು ಹೇಳಿದರು.
ಕೊಟ್ಟೂರು ಸಂಸ್ಥಾನಮಠದ ಬಸವಲಿಂಗ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ಚರಿತ್ರೆಯನ್ನು ತಿಳಿದುಕೊಳ್ಳುವ ಅಗತ್ಯ ಇಲ್ಲ, ಬಸವಣ್ಣನವರ ಆದರ್ಶ, ಸಂದೇಶಗಳನ್ನು ಮುಂದಿಟ್ಟುಕೊಂಡು ನಮ್ಮನ್ನು ನಾವು ತಿಳಿದುಕೊಳ್ಳುವ ಪ್ರಯತ್ಬ ನಡೆಯಬೇಕು ಎಂದರು.
ಹುಬ್ಬಳ್ಳಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಮೈತ್ರೇಯಿಣಿ ಗದಿಗೆಪ್ಪಗೌಡರ ವಿಶೇಷ ಉಪನ್ಯಾಸ ನೀಡಿದರು. ಕೊಪ್ಪಳದ ರಶ್ಮಿ ಹಿಟ್ನಾಳ್ ಮಾತನಾಡಿದರು. ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಸಹಿತ ಹಲವು ಮಠಗಳ ಶ್ರೀಗಳು ಇದ್ದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಬಳಿಕ ಸಾಣೆಹಳ್ಳಿಯ ಶಿವಸಂಚಾರ ಕಲಾ ತಂಡದವರಿಂದ ‘ಜಂಗಮದೆಡೆಗೆ’ ನಾಟಕ ಪ್ರದರ್ಶನಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.