ಹೊಸಪೇಟೆ: 2025-26ನೇ ಸಾಲಿನಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನೂರಪ್ಪ ತಿಳಿಸಿದ್ದಾರೆ.
ಮಾಹಿತಿಗಾಗಿ ನಿಗಮದ ಸಹಾಯವಾಣಿ 9448451111 ಗೆ ಕಚೇರಿ ಸಮಯದಲ್ಲಿ ಹಾಗೂ ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ ವಿಳಾಸಗಳನ್ನು ಸೇರಿದಂತೆ ಎಲ್ಲ ವಿವರಗಳನ್ನು ಆನ್ ಲೈನ್ ತಿಳಿಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ವಿವಿಧೆಡೆ ವಿದ್ಯುತ್ ವ್ಯತಯ
ಹೊಸಪೇಟೆ: ಸಂಕ್ಲಾಪುರ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂನ್ 29ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ದುರಸ್ತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಇಇ ಅವರು ತಿಳಿಸಿದ್ದಾರೆ.
11 ಕೆವಿ ಫೀಡರ್‌ಗಳಾದ ಎಂ.ಪಿ ಪ್ರಕಾಶನಗರ, ಬಸವನದುರ್ಗ (ಎನ್‌ಜೆವೈ) ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.