ಹೊಸಪೇಟೆ (ವಿಜಯನಗರ): ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ರಾಜ್ಯದ ಇತರೆಡೆಗಳಂತೆ ರಾಷ್ಟ್ರೀಯ ಲೋಕ ಅದಾಲತ್ ನಡೆದಿದ್ದು, 5,114 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಹಾಗೂ ₹9.63 ಕೋಟಿ ಹಣ ಸಂದಾಯವಾಗಿದೆ.
ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಲಾಪುರ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 49 ಸಿವಿಲ್ ದಾವೆಗಳನ್ನು ಹಾಗೂ 124 ಚೆಕ್‌ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂಧು ತಿಳಿಸಿದ್ದಾರೆ.
6 ಕ್ರಿಮಿನಲ್ ಕಾಂಪೌಂಡೆಬಲ್ ಪ್ರಕರಣಗಳು, 669 ಕ್ರಿಮಿನಲ್ ಮಿಸಲೇನಿಯಸ್ ಪ್ರಕರಣಗಳು, 4 ಅಪೀಲು ಪ್ರಕರಣಗಳು, 4,253 ಲಘು ಪ್ರಕರಣಗಳು, 9 ಅಪಘಾತ ಪ್ರಕರಣಗಳು ಹಾಗೂ 18 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.