ಹೊಸಪೇಟೆ (ವಿಜಯನಗರ): ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಅವರ ಕಡ್ಡಿರಾಂಪುರದಲ್ಲಿರುವ ಮನೆ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಜನಿ ಅವರ ಅಳಿಯ ಮಾರುತಿ ಅವರು ಬೆಂಗಳೂರು ಬಿಬಿಎಂಪಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ಅತ್ತೆಯವರ ಮನೆ ಮೇಲೆ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.