ADVERTISEMENT

ಕೂಡ್ಲಿಗಿ: ಭೂಮಾಪನ ಎ.ಡಿ, ಸರ್ವೇಯರ್ ಲೋಕಾಯುಕ್ತ ಪೊಲೀಸ್ ಬಲೆಗೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 15:52 IST
Last Updated 11 ಸೆಪ್ಟೆಂಬರ್ 2025, 15:52 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

– ಪ್ರಜಾವಾಣಿ ಚಿತ್ರ

ಕೂಡ್ಲಿಗಿ (ವಿಜಯನಗರ ಜಿಲ್ಲೆ): ಇಲ್ಲಿನ ಭೂಮಾಪನ ಇಲಾಖೆ ಕಚೇರಿ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಜಮೀನಿನ ಸರ್ವೇ ಸಲುವಾಗಿ ₹20 ಸಾವಿರ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ವಿಜಯ ಕುಮಾರ್ ಹಾಗೂ ಸರ್ವೇಯರ್ ನವೀನ್ ಕುಮಾರ್ ಅವರನ್ನು ಬಲೆಗೆ ಬೀಳಿಸಿದ್ದಾರೆ.

ADVERTISEMENT

ತಾಲ್ಲೂಕಿನ ಶಿವಪುರ ಗ್ರಾಮದ ತೇಜಸ್ ಎಂಬುವವರು ತಮ್ಮ ಜಮೀನಿನ ಸರ್ವೇ ವಿಚಾರವಾಗಿ ಹಣ ನೀಡಲು ಬಂದಿದ್ದರು. ಖಚಿತ ಮಾಹಿತಿ ಪಡೆದ ಲೋಕಾಯುಕ್ಳ ಡಿವೈಎಸ್‌ಪಿ ಸಚಿನ್‌ ಎಸ್‌.ಛಲವಾದಿ ನೇತೃತ್ವದ ತಂಡ ದಾಳಿ ನಡೆಸಿತು. ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.