
ಪ್ರಜಾವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ ಬಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಮನೆ ಮೇಲೆ ಲೋಕಾಯುಕ್ತ ದಾಳಿ
ಹಗರಿಬೊಮ್ಮನಹಳ್ಳಿ: ಇಲ್ಲಿನ ಬಳ್ಳಾರಿ ಕೇಂದ್ರ ಸಹಕಾರ ಬ್ಯಾಂಕ್ ನಲ್ಲಿ (ಬಿಡಿಸಿಸಿ) ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕಲ್ಲಮ್ಮನವರ ಮಂಜುನಾಥ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಸಚಿನ್ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ್ದು ಮನೆಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮಂಜುನಾಥ ಅವರ ಸ್ವಗ್ರಾಮ ಅಡವಿ ಆನಂದೇವನಹಳ್ಳಿ ಮನೆಯಲ್ಲೂ ಲೋಕಾಯುಕ್ತ ಪೊಲೀಸರ ತಂಡ ಶೋಧನೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.