ADVERTISEMENT

ವಿಜಯನಗರ: ವಲಯ ಅರಣ್ಯಾಧಿಕಾರಿ ಮಹಾಂತೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 4:41 IST
Last Updated 30 ಅಕ್ಟೋಬರ್ 2023, 4:41 IST
   

ಕಾನಹೊಸಹಳ್ಳಿ : ಇಲ್ಲಿ ಸೋಮವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ರಾಣೆಬೆನ್ನೂರಿನ ವಲಯ ಅರಣ್ಯಾಧಿಕಾರಿ ಮಹಾಂತೇಶ್ ಅವರ ಪತ್ನಿ ಹೇಮಾವತಿ ಅವರ ಹೆಸರಿಗಿರುವ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ.

ಬೆಳಿಗ್ಗೆ ಐದು ಗಂಟೆಯಿಂದ ಪರಿಶೀಲನೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು, ಹೇಮಾವತಿ ಅವರ ತಂದೆ ಮುದ್ದಪ್ಪರ ತಿಪ್ಪೇಸ್ವಾಮಿ ಅವರೊಂದಿಗೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ದಾವಣಗೆರೆಯ ಲೋಕಾಯುಕ್ತ ಇನ್ಸ್ ಪೆಕ್ಟರ್ ಮಧಸೂಧನ್ ಸಿ. ನೇತೃತ್ವದ ಎಂಟು ಜನರ ತಂಡ ದಾಳಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.