ಹೊಸಪೇಟೆ (ವಿಜಯನಗರ): ಚಂದ್ರಗ್ರಹಣದ ಅಂಗವಾಗಿ ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಮುಖ್ಯದ್ವಾರ ಮಂಗಳವಾರ ಮಧ್ಯಾಹ್ನ ಮುಚ್ಚಲಾಯಿತು.
ಸಂಜೆ 6.30ರ ವರೆಗೆ ದೇವಸ್ಥಾನ ಮುಚ್ಚಿರಲಿದ್ದು, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಸಂಜೆ 7ರ ನಂತರ ಭಕ್ತರು ಬಂದು ವಿರೂಪಾಕ್ಷೇಶ್ವರ ಸ್ವಾಮಿಯ ದರ್ಶನ ಪಡೆಯಬಹುದು ಎಂದು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ರಾವ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.