ADVERTISEMENT

ಶಾಸಕರ ಗೈರಿನಲ್ಲಿ ಕಾಂಗ್ರೆಸ್‌ನಿಂದ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 15:56 IST
Last Updated 2 ಅಕ್ಟೋಬರ್ 2024, 15:56 IST
ಹೊಸಪೇಟೆಯಲ್ಲಿ ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪಾದಯಾತ್ರೆ ನಡೆಸಿ ಗೌರವ ಸೂಚಿಸಲಾಯಿತು
ಹೊಸಪೇಟೆಯಲ್ಲಿ ಬುಧವಾರ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪಾದಯಾತ್ರೆ ನಡೆಸಿ ಗೌರವ ಸೂಚಿಸಲಾಯಿತು    

ಹೊಸಪೇಟೆ (ವಿಜಯನಗರ): ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆ ಸಲುವಾಗಿ, ಬುಧವಾರ ಇಲ್ಲಿಯ ಮಹಾತ್ಮ ಗಾಂಧಿ ಮತ್ತು ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಯಂತಿ ಪ್ರಯುಕ್ತ ಕಾಂಗ್ರೆಸ್‌ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಿರಾಜ್ ಶೇಖ್‌ ನೇತೃತ್ವದಲ್ಲಿ ವಡಕರಾಯ ದೇವಸ್ಥಾನ ಬಳಿಯಿಂದ ಮೇನ್ ಬಜಾರ್‌ನಲ್ಲಿ ಪಾದಯಾತ್ರೆ ಸಾಗಿತು ಹಾಗೂ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧೀಜಿ ಪುತ್ಥಳಿಗೆ ಹಾಗೂ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ನಂತರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಕೆಪಿಸಿಸಿ ಜೊತೆ ಝೂಮ್ ಮೀಟಿಂಗ್‌ ಆಧಾರಿತ ವೇದಿಕೆ ಕಾರ್ಯಕ್ರಮ ಜರುಗಿತು.

ADVERTISEMENT

ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಹಾಲಪ್ಪ, ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಉಪಾಧ್ಯಕ್ಷ ಕೆ ರಮೇಶ್, ಸೇವಾದಳ ಜಿಲ್ಲಾ ಸಂಘಟಕ ಬಿ.ಮಾರೆಣ್ಣ, ಸೇವಾದಳ ಜಿಲ್ಲಾ ಅಧ್ಯಕ್ಷೆ ಅಮೀನಾ ಬೀ, ಭಾಗ್ಯಲಕ್ಷ್ಮಿ ಬರಾಡೆ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರಡಿ ಮಂಜುನಾಥ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಇಮಾಮ್ ನಿಯಾಜಿ‌, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಕೆ.ಎಸ್.ದಾದಾಪೀರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಸಿ.ಖಾಜಾ ಹುಸೇನ್ ಇತರರು ಇದ್ದರು.

ಶಾಸಕರ ಗೈರು: ‘ಸ್ವತಃ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರು ಎಲ್ಲಾ ಶಾಸಕರಿಗೆ ಪಾದಯಾತ್ರೆಯಲ್ಲಿ ಭಾಗವಹಿಸಬೇಕೆಂದು ಸೂಚಿಸಿದ್ದರು. ಆದರೆ ನಗರದಲ್ಲೇ ಇದ್ದ ಶಾಸಕ ಎಚ್.ಆರ್.ಗವಿಯಪ್ಪ‍ ಗೈರಾದರು. ಇದು ಪಕ್ಷಕ್ಕೆ ಆದ ದೊಡ್ಡ  ಮುಜುಗರ. ಪಕ್ಷದ ವರಿಷ್ಠರಿಗೆ ಇದರ ವರದಿ ಹೋಗುವುದು ನಿಶ್ಷಿತ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.