ADVERTISEMENT

ಲಾರಿಗೆ ಖಾಸಗಿ ಬಸ್ ಡಿಕ್ಕಿ: ಸುರಪುರದ ಪ್ರಯಾಣಿಕ ಸಾವು

​ಪ್ರಜಾವಾಣಿ ವಾರ್ತೆ
Published 7 ಜೂನ್ 2024, 15:13 IST
Last Updated 7 ಜೂನ್ 2024, 15:13 IST
   

‌ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ತಿಮ್ಮಲಾಪುರ ಗ್ರಾಮದ ಬಳಿಯ ಜಂಬಯ್ಯನಕೆರೆ ಹತ್ತಿರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನಿಂದ ಶಹಾಪುರಕ್ಕೆ ಹೊರಟಿದ್ದ ವಿಆರ್‌ಎಲ್‌ ಬಸ್‌ ಲಾರಿಯೊಂದರ ಹಿಂಬದಿಗೆ ಡಿಕ್ಕಿ ಹೊಡೆದುದರಿಂದ ಸುರಪುರದ ಮೊಯಿದ್ದೀನ್‌ ಬಾಬಾ (32) ಎಂಬುವವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಇತರ  ನಾಲ್ವರು ಗಾಯಗೊಂಡಿದ್ದಾರೆ. ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೊಂದು ವಾಹನ  ಹಿಂದಿಕ್ಕುವ ಯತ್ನದಲ್ಲಿದ್ದಾಗ ಬಸ್‌ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ADVERTISEMENT

ಅಪಘಾತದಲ್ಲಿ ಬಸ್‍ನ ಎಡಬದಿಯ ಮುಂದಿನ ಸೀಟಿನಲ್ಲಿ ಕುಳಿತಿದ್ದ ಮೊಯಿದ್ದೀನ್ ಬಾಬಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸಂಜೆಯ ತನಕ ಎಫ್ಐಆರ್ ದಾಖಲಾಗಿಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.