ಹಗರಿಬೊಮ್ಮನಹಳ್ಳಿ: ‘ಉಚಿತ ಸಾಮೂಹಿಕ ವಿವಾಹಗಳಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು. ಇದೊಂದು ಪುಣ್ಯದ ಕಾರ್ಯ’ ಎಂದು ಶಾಸಕ ಕೆ.ನೇಮರಾಜನಾಯ್ಕ ಹೇಳಿದರು.
ತಾಲ್ಲೂಕಿನ ಕಡಲಬಾಳು ಗ್ರಾಮದಲ್ಲಿ ಮಂಗಳವಾರ ಶಿವಶಾಂತವೀರ ಸ್ವಾಮಿಗಳ 103ನೇ ಪುಣ್ಯರಾಧನೆ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ತಾಲ್ಲೂಕಿನ ಕಡಲಬಾಳು ಗ್ರಾಮದ ಸಮಗ್ರ ಅಭಿವೃದ್ಧಿಗೆ ₹10 ಕೋಟಿ ಅನುದಾನ ಒದಗಿಸಲಾಗಿದೆ. ಕೃಷಿ ಚಟುವಟಿಕೆಗಳಿಗೆ ಪೂರಕವಾಗುವಂತೆ ನೀರಾವರಿ ಯೋಜನೆ ಮೊದಲ ಆದ್ಯತೆ ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಒದಗಿಸಲಾಗಿದೆ’ ಎಂದರು.
13 ಜೋಡಿ ವಧುವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ನಂದಿಪುರ ಮಹೇಶ್ವರ ಸ್ವಾಮೀಜಿ, ಹೂವಿನಹಡಗಲಿಯ ಕೊಪ್ಪಳ ಗವಿಮಠದ ಹಿರಿಶಾಂತವೀರ ಸ್ವಾಮೀಜಿ, ಚಾನುಕೋಟಿ ಮಠದ ಸಿದ್ದಲಿಂಗಸ್ವಾಮೀಜಿ, ಹಾಲಸಿದ್ದೇಶ್ವ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಬಿ.ಗಂಗಾಧರ, ಪುರಸಭೆ ಸದಸ್ಯರಾದ ನಾಗರಾಜ ಜನ್ನು, ದೀಪಕ್‌ಸಾ ಕಠಾರೆ, ಮುಖಂಡರಾದ ಎ.ಎಂ.ನಾಗರಾಜ, ಬ್ಯಾಟಿ ನಾಗರಾಜ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥಗೌಡ, ಗ್ರಾಮ ಪಂಚಾಯಿತಿ ಸದಸ್ಯ ಸಿ.ರಮೇಶ್, ಹೋಟೆಲ್ ಸಿದ್ದರಾಜು, ಪಿಡಿಒ ಮಾಗಳದ ನಿಂಗಪ್ಪ, ಎ.ಎಂ.ಕೊಟ್ರೇಶ್, ಎ.ಎಂ.ಗಂಗಾಧರಯ್ಯ, ಗವಿಸಿದ್ದಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.