ADVERTISEMENT

ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ: ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2022, 12:16 IST
Last Updated 25 ಫೆಬ್ರುವರಿ 2022, 12:16 IST
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ.
ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ.    

ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಯ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರಿರುವ ಪ್ರದೇಶದ ಬಳಿ ಯಾವುದೇ ದಾಳಿ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ತಿಳಿಸಿದರು.

‘ನಂದಿನಿ, ಹಿರೇಮಠ ಸಂಜಯ್‌ ಕುಮಾರ್‌, ವಿಕಾಸ ಪಾಟೀಲ ಅವರು ಉಕ್ರೇನಿನ ಜೆಪೊರೊಜಿಯಾ ಮೆಡಿಕಲ್‌ ಯೂನಿರ್ವಸಿಟಿಯ ವಿದ್ಯಾರ್ಥಿಗಳಾದರೆ, ಲಾವಣ್ಯ ಅವರು ಪೊಲ್‌ಟಾವ್‌ ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ. ಜಿಲ್ಲಾಡಳಿತ ಮೂವರೊಂದಿಗೆ ಸಂಪರ್ಕಿಸಿದೆ. ಸಹಾಯವಾಣಿ ಸಂಖ್ಯೆ ನೀಡಲಾಗಿದೆ. ವಿದೇಶಾಂಗ ಸಚಿವಾಲಯದ ಮೂಲಕ ಸಹಾಯ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಕೂಡ ವೆಬ್‌ಸೈಟ್‌ ಆರಂಭಿಸಿದ್ದು, ಅದರಲ್ಲಿ ಮಾಹಿತಿ ದಾಖಲಿಸಬಹುದು. ಗಗನ್‌ದೀಪ್‌ ಸೇರಿದಂತೆ ಇನ್ನೂ ಜಿಲ್ಲೆಯ ಕೆಲ ವಿದ್ಯಾರ್ಥಿಗಳು ಅಲ್ಲಿ ಇದ್ದಾರೆಂಬ ಮಾಹಿತಿ ಇದೆ. ಆದರೆ, ಖಚಿತವಾಗಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT