ADVERTISEMENT

ಎಸ್‌ಟಿಗೆ ಕುರುಬ: ವಾಲ್ಮೀಕಿ ಜಯಂತಿ ಸಭೆ ಬಹಿಷ್ಕಾರ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 16:34 IST
Last Updated 19 ಸೆಪ್ಟೆಂಬರ್ 2025, 16:34 IST
ಹೊಸಪೇಟೆಯಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿ ಕುರಿತ ಪೂರ್ವಭಾವಿ ಸಭೆಯನ್ನು ವಾಲ್ಮೀಕಿ ಸಮಾಜದವರು ಬಹಿಷ್ಕರಿಸಿದರು.
–ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿ ಕುರಿತ ಪೂರ್ವಭಾವಿ ಸಭೆಯನ್ನು ವಾಲ್ಮೀಕಿ ಸಮಾಜದವರು ಬಹಿಷ್ಕರಿಸಿದರು. –ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ‘ಕುರುಬರು ಸೇರಿ ವಿವಿಧ ಸಮಾಜದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದೆ’ ಎಂದು ಆರೋಪಿಸಿ ವಾಲ್ಮೀಕಿ ಸಮಾಜದವರು ಶುಕ್ರವಾರ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯನ್ನು ಬಹಿಷ್ಕರಿಸಿದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಕರೆದಿದ್ದ ಸಭೆ ಆರಂಭವಾಗುತ್ತಿದ್ದಂತೆಯೇ, ‘ಸರ್ಕಾರದ ನಿಲುವಿಗೆ ವಿರೋಧ ತಿಳಿಸಿ. ಸಭೆಯನ್ನು ಬಹಿಷ್ಕರಿಸುತ್ತೇವೆ’ ಎಂದರು.

‘ರಾಜನಹಳ್ಳಿ ಗುರುಪೀಠದಲ್ಲಿ ಗುರುವಾರ ನಡೆದ ಸಭೆಯಲ್ಲೂ ಗದ್ದಲ ಆಗಿತ್ತು. ನಮಗೆ ಅನ್ಯಾಯ ಮಾಡಲು, ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ವಿರೋಧ ಇದೆ. ನ್ಯಾಯ ಸಿಗುವವರೆಗೂ, ಹೋರಾಡುತ್ತೇವೆ’ ಎಂದು ಹೇಳಿ ಮುಖಂಡರು ಸಭೆಯಿಂದ ಹೊರನಡೆದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.