ಹರಪನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಇಟ್ಟಿಗುಡಿ ಬೇವಿನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಬಿಸಿಯೂಟ ಸೇವಿಸಿದ ಇಬ್ಬರು ವಿದ್ಯಾರ್ಥಿಗಳು ವಾಂತಿಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಭಯಗೊಂಡ ಉಳಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಹ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
‘ಮಧ್ಯಾಹ್ನ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವುದನ್ನು ವಿದ್ಯಾರ್ಥಿಗಳು ಗಮನಿಸಿದ್ದರು ಹಾಗೂ ಅದನ್ನು ಶಿಕ್ಷಕರಿಗೂ ತೋರಿಸಿದ್ದರು. ಶಾಲೆಯ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ಅದೇ ಬಿಸಿಯೂಟ ಸೇವಿಸಿದ್ದರು. ಮೊದಲಿಗೆ ಇಬ್ಬರು ಮಕ್ಕಳಿಗೆ ವಾಂತಿಭೇದಿ ಕಾಣಿಸಿಕೊಂಡ ಕಾರಣ ಹಲವಾಗಲು ಸರ್ಕರಿ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಈಗ ಚೇತರಿಸಿಕೊಂಡಿದ್ದಾರೆ. ಬಳಿಕ ಬಂದ 25ಕ್ಕೂ ಹೆಚ್ಚು ಮಕ್ಕಳಿಗೆ ಅಂತಹ ಲಕ್ಷಣ ಇಲ್ಲದಿದ್ದರೂ ಪರೀಕ್ಷಿಸಿ ಚಿಕಿತ್ಸೆ ನೀಡಲಾಗಿದೆ, ಯಾರಿಗೂ ಯಾವುದೇ ಅಪಾಯ ಇಲ್ಲ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪೃಥ್ವಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.