ADVERTISEMENT

ಹಂಪಿ ಜೈವಿಕ ಉದ್ಯಾನಕ್ಕೆ ಸಚಿವ ಶ್ರೀರಾಮುಲು ಭೇಟಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 12:39 IST
Last Updated 28 ಆಗಸ್ಟ್ 2022, 12:39 IST
ಹಂಪಿ ಜೂಗೆ ಭೇಟಿ ನೀಡಿದ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಜೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್‌. ಕಿರಣ್‌ ಕುಮಾರ್‌ ಮಾಹಿತಿ ನೀಡಿದರು. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಮಾಜಿಸಂಸದೆ ಜೆ. ಶಾಂತಾ ಇದ್ದಾರೆ
ಹಂಪಿ ಜೂಗೆ ಭೇಟಿ ನೀಡಿದ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಜೂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್‌. ಕಿರಣ್‌ ಕುಮಾರ್‌ ಮಾಹಿತಿ ನೀಡಿದರು. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಮಾಜಿಸಂಸದೆ ಜೆ. ಶಾಂತಾ ಇದ್ದಾರೆ   

ಹೊಸಪೇಟೆ (ವಿಜಯನಗರ): ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಭಾನುವಾರ ತಾಲ್ಲೂಕಿನ ಕಮಲಾಪುರ ಸಮೀಪದ ಅಟಲ್‌ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನಕ್ಕೆ (ಹಂಪಿ ಜೂ) ಭೇಟಿ ನೀಡಿದರು.

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಮಾಜಿಸಂಸದೆ ಜೆ. ಶಾಂತಾ ಅವರೊಂದಿಗೆ ಉದ್ಯಾನಕ್ಕೆ ಬಂದ ಶ್ರೀರಾಮುಲು ಅವರು ಪ್ಲಾಜಾ, ಕೆಫೆ ನಿರ್ಮಾಣ ಕಾಮಗಾರಿ ವೀಕ್ಷಿಸಿ ಉದ್ಯಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್‌. ಕಿರಣ್‌ ಕುಮಾರ್‌ ಅವರಿಂದ ಮಾಹಿತಿ ಪಡೆದರು.

ಹುಲಿ, ಸಿಂಹ ಸಫಾರಿ ನೋಡಿದರು. ಪ್ರಿಯದರ್ಶಿನಿ ಜಿಂಕೆ ಉದ್ಯಾನ, ಮೃಗಾಲಯಕ್ಕೆ ಭೇಟಿ ನೀಡಿ, ಪ್ರಾಣಿ, ಪಕ್ಷಿಗಳನ್ನು ಕಣ್ತುಂಬಿಕೊಂಡರು. ‘ಉದ್ಯಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದರ ಏಳಿಗೆಗೆ ಬೇಕಾದ ಅಗತ್ಯ ನೆರವು ಕಲ್ಪಿಸಲಾಗುವುದು’ ಎಂದು ಶ್ರೀರಾಮುಲು ಹೇಳಿದರು.

ADVERTISEMENT

ಬಳಿಕ ಶ್ರೀರಾಮುಲು, ಜನಾರ್ದನ ರೆಡ್ಡಿ ಅವರು ಕೊಪ್ಪಳ ತಾಲ್ಲೂಕಿನ ಗಂಗಾವತಿ ಸಮೀಪದ ಪಂಪಾವನಕ್ಕೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.