ಹೂವಿನಹಡಗಲಿ: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಟ್ಟಣದ ಬೇಕರಿ ಮಾಲೀಕರೊಬ್ಬರ ಶವ ತುಂಗಭದ್ರಾ ನದಿಯಲ್ಲಿ ಪುರ ಗ್ರಾಮದ ಬಳಿ ಗುರುವಾರ ಪತ್ತೆಯಾಗಿದೆ.
ತಾಲ್ಲೂಕಿನ ನವಲಿ ಗ್ರಾಮದ ನಿವಾಸಿ ವೀರೇಶ್ (32) ಮೃತರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಪಟ್ಟಣದ ಮದಲಗಟ್ಟಿ ವೃತ್ತದ ಬಳಿ ಬೇಕರಿ ನಡೆಸುತ್ತಿದ್ದ ವೀರೇಶ್, ನಾಪತ್ತೆಯಾಗಿದ್ದರು. ಕುಟುಂಬದವರು ಎಲ್ಲ ಕಡೆ ಹುಡುಕಾಟ ನಡೆಸಿದ್ದರು. ವೀರೇಶ ಶವ ನದಿಯಲ್ಲಿ ಪತ್ತೆಯಾಗಿದ್ದು, ಅಸಹಜ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.