ADVERTISEMENT

ವಿಜಯನಗರ: ಮೂವರು ಮೊಬೈಲ್ ಕಳ್ಳರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 13:09 IST
Last Updated 7 ಮಾರ್ಚ್ 2022, 13:09 IST

ಹೊಸಪೇಟೆ (ವಿಜಯನಗರ): ಅಪ್ರಾಪ್ತ ಬಾಲಕ ಸೇರಿದಂತೆ ಮೂವರು ಮೊಬೈಲ್‌ ಕಳ್ಳರನ್ನು ಇಲ್ಲಿನ ಪಟ್ಟಣ ಠಾಣೆ ಪೊಲೀಸರು ಸೋಮವಾರ ನಗರದ ಬಸ್‌ ನಿಲ್ದಾಣದ ಬಳಿ ವಶಕ್ಕೆ ತೆಗೆದುಕೊಂಡಿದ್ದಾರೆ.

‘ವಿವಿಧ ಕಂಪನಿಗಳ ₹53 ಸಾವಿರ ಮೌಲ್ಯದ ಕದ್ದ ಮೊಬೈಲ್‌ಗಳನ್ನು ಇಟ್ಟುಕೊಂಡು ಬಸ್‌ ನಿಲ್ದಾಣದ ಬಳಿ ತಿರುಗಾಡುತ್ತಿದ್ದರು. ಮೂವರನ್ನು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಗಂಗಾವತಿಯ ಉಂಚೆಮ್ಮ ವೀರೇಶ (19), ಮಂಜುನಾಥ ಯಮನೂರಪ್ಪ (19) ವಶದಲ್ಲಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಕೋದಂಡಪಾಣಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.