ADVERTISEMENT

ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹5 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 13:42 IST
Last Updated 31 ಮಾರ್ಚ್ 2023, 13:42 IST

ಹೊಸಪೇಟೆ (ವಿಜಯನಗರ ಜಿಲ್ಲೆ): ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹5.26 ಲಕ್ಷ ನಗದು ಹಣವನ್ನು ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಬಳಿಯ ಚೆಕಪೋಸ್ಟ್ ನಲ್ಲಿ ಚುನಾವಣಾ ಸಿಬ್ಬಂದಿ ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

‘ಚಿಕ್ಕಬಳ್ಳಾಪುರದ ನರಸೆಗೌಡ ಎಂಬುವರು ಇತರೆ ನಾಲ್ಕು ಜನರೊಂದಿಗೆ ಬೊಲೊರೊ ಸರಕು ಸಾಗಣೆ ವಾಹನದಲ್ಲಿ ಶುಕ್ರವಾರ ಹೆದ್ದಾರಿ ಮೂಲಕ ತೆರಳುತ್ತಿದ್ದರು. ವಾಹನ ತಡೆದು ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿದೆ. ಅದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಅವರ ಬಳಿಯಿರಲಿಲ್ಲ. ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT