ADVERTISEMENT

ವಿಜಯನಗರ ಜಿಲ್ಲೆಯ ಹಲವೆಡೆ ಜಿಟಿಜಿಟಿ ಮಳೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 6:43 IST
Last Updated 22 ಜುಲೈ 2021, 6:43 IST
ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿಯಲ್ಲಿ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ಜನ ಛತ್ರಿ ಹಿಡಿದುಕೊಂಡು ಓಡಾಡುತ್ತಿದ್ದಾರೆ
ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿಯಲ್ಲಿ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ಜನ ಛತ್ರಿ ಹಿಡಿದುಕೊಂಡು ಓಡಾಡುತ್ತಿದ್ದಾರೆ   

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ.

ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಕಾನಹೊಸಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿಯಲ್ಲಿ ಮಳೆ ಸುರಿಯುತ್ತಿದೆ. ಎರಡು ದಿನ ಬಿಡುವು ಕೊಟ್ಟಿದ್ದ ಮಳೆ ಗುರುವಾರದಿಂದ ಪುನಃ ಆರಂಭವಾಗಿದೆ. ದಟ್ಟ ಕಾರ್ಮೋಡ ಕವಿದು ಮಳೆಯಾಗುತ್ತಿರುವುದರಿಂದ ವಾತಾವರಣ ಸಂಪೂರ್ಣ ತಂಪಾಗಿದೆ.

ಜಿಟಿಜಿಟಿ ಮಳೆಯಲ್ಲೇ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಬಂದರು. ಜನ ದೈನಂದಿನ ಕೆಲಸಗಳಿಗೆ ತೆರಳಿದರು.

ADVERTISEMENT
ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿಯಲ್ಲಿ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ಜನ ಛತ್ರಿ ಹಿಡಿದುಕೊಂಡು ಓಡಾಡುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.