ADVERTISEMENT

ಮುನಿರಾಬಾದ್ ರೈಲ್ವೆ ನಿಲ್ದಾಣ: ಮರುನಾಮಕರಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2024, 3:36 IST
Last Updated 27 ಫೆಬ್ರುವರಿ 2024, 3:36 IST

ಹೊಸಪೇಟೆ(ವಿಜಯನಗರ): ನೈರುತ್ಯ ರೈಲ್ವೆ ವಲಯದ ಮುನಿರಾಬಾದ್ ರೈಲ್ವೆ ನಿಲ್ದಾಣಕ್ಕೆ ಶ್ರೀ ಹುಲಿಗೆಮ್ಮದೇವಿ ರೈಲ್ವೆ ನಿಲ್ದಾಣವೆಂದು ಮರುನಾಮಕರಣಕ್ಕೆ ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ಮುನಿರಾಬಾದ್ ರೈಲ್ವೆ ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಆಗಮಿಸಿದ್ದ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಸಮಿತಿ ಪದಾಧಿಕಾರಿಗಳು ಸೋಮವಾರ ಒತ್ತಾಯಿಸಿದರು.

‘ಅಮೃತ್ ಭಾರತ್ ರೈಲ್ವೆ ನಿಲ್ದಾಣ’ ಯೋಜನೆಯಡಿ ಮುನಿರಾಬಾದ್ ರೈಲ್ವೆ ನಿಲ್ದಾಣ ನವೀಕರಣ ಕೈಗೊಂಡಿದ್ದು ಸ್ವಾಗತಾರ್ಹ. ಅಲ್ಲದೆ, ಹುಲಿಗೆಮ್ಮ ದೇವಿ ದೇವಸ್ಥಾನವು ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿದೆ. ಹುಲಗಿ ರೈಲ್ವೆ ನಿಲ್ದಾಣಕ್ಕೆ ‘ಶ್ರೀ ಹುಲಿಗೆಮ್ಮದೇವಿ ರೈಲ್ವೆ ನಿಲ್ದಾಣ’ವೆಂದು ಮರು ನಾಮಕರಣ ಮಾಡಬೇಕು ಎಂದು ಮನವಿ ಮಾಡಿದರು.

ADVERTISEMENT

ಹುಲಿಗಿ (ಹಿಟ್ನಾಳ್)– ಬೂದುಗುಂಪಾ ನಡುವೆ ಬೈಪಾಸ್ ರೈಲ್ವೆ ಮಾರ್ಗ ನಿರ್ಮಿಸಬೇಕು. ಗಂಗಾವತಿ-ಸಿಂಧನೂರು ತಾಲ್ಲೂಕುಗಳಿಂದ ಹೊಸಪೇಟೆ- ದಾವಣಗೆರೆ- ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಿಗೆ ತ್ವರಿತವಾಗಿ ಸಂಪರ್ಕ ಕಲ್ಪಿಸಲು ಬೈಪಾಸ್ ರೈಲ್ವೆ ಮಾರ್ಗ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.

ವೈ.ಯಮುನೇಶ್, ಮಹೇಶ ಕುಡತಿನಿ, ಉಮಾ ಮಹೇಶ್ವರ್, ವಿಶ್ವನಾಥ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.