ADVERTISEMENT

ಜೀವ ಬೆದರಿಕೆ ಆರೋಪ: ಸಚಿವ ಆನಂದ್‌ ಸಿಂಗ್‌ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 18:16 IST
Last Updated 30 ಆಗಸ್ಟ್ 2022, 18:16 IST
ಆನಂದ್‌ ಸಿಂಗ್‌
ಆನಂದ್‌ ಸಿಂಗ್‌   

ಹೊಸಪೇಟೆ (ವಿಜಯನಗರ): ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹಾಗೂ ಇತರೆ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.

ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್‌ 504, 506ರ ಅಡಿ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯ ಆನಂದ್‌ ಸಿಂಗ್‌, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ತಿಳಿಸಿದ್ದಾರೆ.

‘ಪೆಟ್ರೋಲ್‌ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್‌ ಸಿಂಗ್‌ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT