ADVERTISEMENT

ಹೂವಿನಹಡಗಲಿ: ನಂದಿಹಳ್ಳಿ ಕಂಠಿಬಸವೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 14:22 IST
Last Updated 29 ಡಿಸೆಂಬರ್ 2022, 14:22 IST
   

ಹೂವಿನಹಡಗಲಿ (ವಿಜಯನಗರ ಜಿಲ್ಲೆ) : ತಾಲ್ಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ಕಂಠಿ ಬಸವೇಶ್ವರ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು. ಸಮಾಳ, ನಂದಿಕೋಲು ಮಂಗಳವಾದ್ಯಗಳು ವಿಜೃಂಭಣೆಯ ರಥೋತ್ಸವ ಮೆರಗು ತಂದಿದ್ದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ವಿ.ಬಿ.ರಾಜಕುಮಾರ್ ₹1.12 ಲಕ್ಷಕ್ಕೆಎ ಸ್ವಾಮಿಯ ಪಟ ಪಡೆದರು. ಕಂಠಿಬಸವೇಶ್ವರ ಟ್ರಸ್ಟ್ ಕಮಿಟಿಯ ಪದಾಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು. ನಂದಿಹಳ್ಳಿ ಸುತ್ತಮುತ್ತಲ ಗ್ರಾಮಗಳ ಅಪಾರ ಜನರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.