ADVERTISEMENT

ನಾರಾಯಣ ಗುರು ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 8:57 IST
Last Updated 23 ಆಗಸ್ಟ್ 2021, 8:57 IST
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರೇಡ್‌–2 ತಹಶೀಲ್ದಾರ್‌ ಮೇಘನಾ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರೇಡ್‌–2 ತಹಶೀಲ್ದಾರ್‌ ಮೇಘನಾ ಅವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು   

ಹೊಸಪೇಟೆ(ವಿಜಯನಗರ): ತಾಲ್ಲೂಕು ಆಡಳಿತದಿಂದ ಸೋಮವಾರ ಬ್ರಹ್ಮಶ್ರೀ ನಾರಾಯಣ ಗುರು ಅವರ ಜಯಂತಿ ಸರಳವಾಗಿ ಆಚರಿಸಲಾಯಿತು.

ತಾಲ್ಲೂಕು ಕಚೇರಿಯ ಆವರಣದಲ್ಲಿ ಸೋಮವಾರ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಗ್ರೇಡ್‌–2 ತಹಶೀಲ್ದಾರ್‌ ಮೇಘನಾ ಪೂಜೆ ನೆರವೇರಿಸಿ, ಪುಷ್ಪಾರ್ಚನೆ ಮಾಡಿದರು.

‘ನಾರಾಯಣ ಗುರು ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರು. ಕೇರಳದಲ್ಲಿ ದೊಡ್ಡ ಬದಲಾವಣೆಗೆ ನಾಂದಿ ಹಾಡಿದವರು. ಸಮಾಜದಲ್ಲಿ ಸ್ತ್ರೀ ಸಮಾನತೆಗೆ ಶ್ರಮಿಸಿದ ಮಹಾನುಭಾವರು. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು’ ಎಂದು ಹೇಳಿದರು.

ADVERTISEMENT

ಶಿರಸ್ತೇದಾರ ರಮೇಶ್, ಆರ್ಯ ಈಡಿಗ ಸಮಾಜದ ಜಿಲ್ಲಾ ಘಟಕದ ಚಂದ್ರಶೇಖರ್, ಗೌರವ ಅಧ್ಯಕ್ಷ ಪ್ರಹ್ಲಾದ್, ವಿ.ವೀರಣ್ಣ, ಕುಮಾರ, ಮಹಿಳಾ ಘಟಕದ ಶೀಲಾ, ಅಂಬುಜಾಕ್ಷಿ, ಮಂಗಳಾ, ಕೃಷ್ಣಪ್ಪ, ರಾಘವೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.