ADVERTISEMENT

ಹೊಸಪೇಟೆ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹ, ರೈತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 7:37 IST
Last Updated 26 ನವೆಂಬರ್ 2021, 7:37 IST
ರೈತರು ಹೊಸಪೇಟೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ತಡೆದು ಪ್ರತಿಭಟನೆ ನಡೆಸಿದರು.
ರೈತರು ಹೊಸಪೇಟೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ತಡೆದು ಪ್ರತಿಭಟನೆ ನಡೆಸಿದರು.   

ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ರೈತರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50 ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ನಗರದ ಸಾಯಿಬಾಬಾ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ ವರೆಗೆ ಜಾಥಾ ನಡೆಸಿದರು. ನಂತರ ಹೆದ್ದಾರಿಯ ಲ್ಲಿ ಕುಳಿತು, ವಾಹನಗಳನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ವಾಹನ ಸಂಚಾರ ತಡೆದಿದ್ದಾರೆ.

ರಸ್ತೆ ತಡೆ ಚಳವಳಿಯಿಂದ ಬೆಂಗಳೂರು, ಮಂಗಳೂರು, ವಿಜಯಪುರ, ಪುಣೆಗೆ ಹೋಗುವವರು ಪರದಾಟ ನಡೆಸುವಂತಾಗಿದೆ. ರಸ್ತೆಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.