ಹೊಸಪೇಟೆ (ವಿಜಯನಗರ): ಕಲ್ಯಾಣ ಕರ್ನಾಟಕದಲ್ಲಿ ಸಫಾರಿ ಹೊಂದಿರುವ ಏಕೈಕ ಮೃಗಾಲಯ ಎಂಬ ಖ್ಯಾತಿ ಪಡೆದಿರುವ ಹಂಪಿ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಜಿಯಾಲಾಜಿಕಲ್ ಪಾರ್ಕ್‌ಗೆ ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದಿಂದ ‘ರೇವಾ’ ಎಂಬ ಗಂಡು ಹುಲಿಯನ್ನು ಗುರುವಾರ ತರಲಾಗಿದೆ.
‘ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣಿಗಳನ್ನು ತರಿಸಲಾಗುತ್ತಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಪಿಲಿಕುಳದಿಂದ ಒಂದು ಗಂಡು ಹುಲಿ ಮತ್ತು ಒಂದು ಗಂಡು ನೀರು ಕುದುರೆಯನ್ನು ತರಿಸಲು ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರ ಅನುಮತಿ ನೀಡಿದೆ. ಅದರಂತೆ ಹುಲಿ ಬಂದಿದ್ದು, ಮುಂದಿನ ದಿನಗಳಲ್ಲಿ ನೀರು ಕುದುರೆ ಬರಲಿದೆ’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿರುವ ಡಿಸಿಎಫ್ ರಾಜೇಶ್ ನಾಯ್ಕ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.