ADVERTISEMENT

ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 5:42 IST
Last Updated 15 ಅಕ್ಟೋಬರ್ 2025, 5:42 IST
<div class="paragraphs"><p>ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್</p></div>

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

   

ಹೊಸಪೇಟೆ (ವಿಜಯನಗರ): ದಕ್ಷಿಣ ಕಾಶಿ ಎಂದೂ ಕರೆಸಿಕೊಳ್ಳುವ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಬುಧವಾರ ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು.

ವಿರೂಪಾಕ್ಷನ ದರ್ಶನ ಪಡೆದ ನಿರ್ಮಲಾ ಸೀತಾರಾಮನ್, ಹಂಪಿಯ ಆನೆ ಲಕ್ಷ್ಮೀಯಿಂದ ಆಶೀರ್ವಾದ ಪಡೆದರು.

ADVERTISEMENT

ಬಳ್ಳಾರಿ ಸಂಸದ ಇ.ತುಕಾರಾಂ, ಸಚಿವೆ ನಿರ್ಮಲಾ ಸೀತಾರಾಮನ್ ಆಪ್ತ ಕಾರ್ಯದರ್ಶಿ ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಆನೆಗುಂದಿ ಸಂಸ್ಥಾನದ ರಾಜ ವಂಶಸ್ಥ ಶ್ರೀಕೃಷ್ಣದೇವರಾಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.