ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಪಾಕಿಸ್ತಾನದ ಯಾವೊಬ್ಬ ಪ್ರಜೆಯೂ ವಾಸವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಶ್ರೀಹರಿಬಾಬು ಬಿ.ಎಲ್.ತಿಳಿಸಿದ್ದಾರೆ.
‘ಪಾಸ್‌ಪೋರ್ಟ್ ಸೇವೆಯ ಮಾಹಿತಿಯಿಂದ ಇದು ದೃಢಪಟ್ಟಿದೆ. ಜಿಲ್ಲೆಯ ಎಲ್ಲಾ ಠಾಣೆಗಳಲ್ಲೂ ಈ ಬಗ್ಗೆ ಪರಿಶೀಲನೆ ನಡೆಸಿದಾಗಲೂ ಯಾವೊಬ್ಬ ಪಾಕ್ ಪ್ರಜೆಯೂ ಜಿಲ್ಲೆಯಲ್ಲಿ ಇಲ್ಲ ಎಂಬುದು ದೃಢಪಟ್ಟಿದೆ’ ಎಂದು ಅವರು ಶನಿವಾರ ‘ಪ್ರಜಾವಾಣಿ’ಗೆ ತಿಳಿಸಿದರು.
ಕಟ್ಟೆಚ್ಚರ: ಜಿಲ್ಲೆಯಲ್ಲಿ ಹಂಪಿ ಮತ್ತು ಟಿ.ಬಿ.ಡ್ಯಾಂ ಪ್ರದೇಶಗಳು ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸ್ಥಳಗಳು. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಯ ಬಳಿಕ ಈ ಪ್ರವಾಸಿಗರ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ತಪಾಸಣೆಗಳನ್ನು ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.