ಕರ್ನಾಟಕ ಬಂದ್
ಹೊಸಪೇಟೆ (ವಿಜಯನಗರ): ಮಹಾರಾಷ್ಟ್ರದಲ್ಲಿ ಕನ್ನಡಿಗರ ವಿರುದ್ದ ನಡೆಯುತ್ತಿರುವ ಮರಾಠಿಗರ ಪುಂಡಾಟಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ವಿಜಯನಗರ ಜಿಲ್ಲೆಯಲ್ಲಿ ಶನಿವಾರ ಉತ್ತಮ ಸ್ಪಂದನೆ ವ್ಯಕ್ತವಾಗಿಲ್ಲ.
ಹೊಸಪೇಟೆ ಸಹಿತ ಇತರೆಡೆ ಜನಜೀವನ ಎಂದಿನಂತೆಯೇ ಇದೆ, ಆಟೊ, ಟ್ಯಾಕ್ಸಿ, ಬಸ್ ಸಂಚಾರ ಸಹ ಮಾಮೂಲಿನಂತೆಯೇ ಇದೆ.
ಹೊಸಪೇಟೆಯಲ್ಲಿ ಯಾವ ಸಂಘಟನೆಯೂ ಬಂದ್‌ಗೆ ಬೆಂಬಲ ಸೂಚಿಸಿ ಹೇಳಿಕೆ ಕೊಟ್ಟಿರಲಿಲ್ಲ. ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಬಣಗಳು ಸಹ ನಿರ್ಲಿಪ್ತವಾಗಿದ್ದವು. ಹೀಗಾಗಿ ಬಂದ್ ಪರಿಣಾಮ ಬೀರುವುದಿಲ್ಲ ಎಂಬುದು ಶುಕ್ರವಾರವೇ ಬಹುತೇಕ ಖಾತ್ರಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.