ADVERTISEMENT

ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಅಂತಿಮ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 5:57 IST
Last Updated 2 ಜನವರಿ 2026, 5:57 IST
<div class="paragraphs"><p>ಮತದಾರರ ಪಟ್ಟಿ</p></div>

ಮತದಾರರ ಪಟ್ಟಿ

   

ಕೃಪೆ:ಪಿಟಿಐ

ಹೊಸಪೇಟೆ: ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ADVERTISEMENT

ಪಟ್ಟಿಯಲ್ಲಿ ಒಟ್ಟು 3,206 ಮತದಾರರು ನೋಂದಣಿಯಾಗಿದ್ದಾರೆ. ಇದರಲ್ಲಿ ವಿಜಯನಗರ 852, ಹೂವಿನಹಡಗಲಿ 448, ಹಗರಿಬೊಮ್ಮನಹಳ್ಳಿ 464, ಕೂಡ್ಲಿಗಿ 336, ಹರಪನಹಳ್ಳಿ 592, ಕೊಟ್ಟೂರು 514 ಮತದಾರರು ಸೇರಿದ್ದಾರೆ.

ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಕಾರಣ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.