ADVERTISEMENT

ವಿಜಯನಗರ | ಕಳಪೆ ಈರುಳ್ಳಿ ಬೀಜ: ಕ್ರಮಕ್ಕೆ ಒತ್ತಾಯ

ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದಿಂದ ಸಿಎಂಗೆ ಮನವಿ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 4:53 IST
Last Updated 13 ಆಗಸ್ಟ್ 2025, 4:53 IST
ಹೊಸಪೇಟೆಯಲ್ಲಿ ಮಂಗಳವಾರ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರಿಗೆ ಮನವಿ ಸಲ್ಲಿಸಿದರು  –ಪ್ರಜಾವಾಣಿ ಚಿತ್ರ
ಹೊಸಪೇಟೆಯಲ್ಲಿ ಮಂಗಳವಾರ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಅವರಿಗೆ ಮನವಿ ಸಲ್ಲಿಸಿದರು  –ಪ್ರಜಾವಾಣಿ ಚಿತ್ರ   

ಹೊಸಪೇಟೆ (ವಿಜಯನಗರ): ಜಿಲ್ಲೆಯಲ್ಲಿ ಈರುಳ್ಳಿಯ ಕಳಪೆ ಬೀಜಗಳನ್ನು ಮಾರಾಟ ಮಾಡಿದ ಎರಡು ಕಂಪನಿಗಳಿಂದಾಗ ರೈತರು ನಷ್ಟಕ್ಕೆ ಒಳಗಾಗಿದ್ದಾರೆ. ಈ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಈರುಳ್ಳಿ ಬೆಳೆಗಾರರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಅಧ್ಯಕ್ಷ ಎನ್‌.ಎಂ.ಸಿದ್ದೇಶ್. ಉಪಾಧ್ಯಕ್ಷ ಕರಡಿ ಶಾಂತಕುಮಾರ್ ಚಪ್ಪರದಹಳ್ಳಿ. ಜಿಲ್ಲಾ ಘಟಕದ ಅಧ್ಯಕ್ಷ ಕೊಚ್ಚಾಲಿ ಮಂಜುನಾಥ್ ಅವರ ನೇತೃತ್ವದಲ್ಲಿ ಜಿಲ್ಲಾದಿಕಾರಿ ಎಂ.ಎಂ.ದಿವಾಕರ್ ಅವರನ್ನು ನಿಯೋಗ ಭೇಟಿ ಮಾಡಿ, ಸಿಎಂಗೆ ಮನವಿ ಸಲ್ಲಿಸಿತು.

‘ಕಳಸಾ’ ಮತ್ತು ‘ಪ್ರೇಮ’ ಎಂಬ ಬೀಜ ಕಂಪನಿಗಳು ರೈತರಿಗೆ ಪೂರೈಸಿದ ಈರುಳ್ಳಿ ಬೀಜ ಕಳಪೆಯಾಗಿದ್ದವು. ಇದರ ಬಗ್ಗೆ ಸಮಗ್ರ ತನಿಖೆ ನಡೆದಿ ಕಂಪನಿಗಳು ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ದರ ಕುಸಿತ: ಈರುಳ್ಳಿ ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಸರ್ಕಾರ ₹4,000 ಬೆಂಬಲ ಬೆಲೆ ಘೋಷಿಸಬೇಕು ಮತ್ತು ಎಲ್ಲಾ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಯೂರಿಯಾ ಗೊಬ್ಬರ ಕೊರತೆಯನ್ನು ನೀಗಿಸಬೇಕು ಎಂದು ಸಹ ಮನವಿಯಲ್ಲಿ ವಿನಂತಿ ಮಾಡಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಪ್ರದಾನ ಕಾರ್ಯದರ್ಶಿ ಜಿ.ಮಲ್ಲಿಕಾರ್ಜುನ್. ದೊಡ್ಡಬಸಪ್ಪ ಬ್ಯಾಲಾಳ್ ಹಗರಿಬೊಮ್ಮನಹಳ್ಳಿ.  ಅಲಬೂರು ಗ ದೇವಪ್ಪ, ವರಕೇರಿ ಹನುಮಂತಪ್ಪ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.