ADVERTISEMENT

ವಿಜಯನಗರ: ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 15:29 IST
Last Updated 14 ಸೆಪ್ಟೆಂಬರ್ 2021, 15:29 IST
ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು
ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು   

ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ರಾಷ್ಟ್ರೀಕೃತ ಬ್ಯಾಂಕುಗಳ ಎದುರು ಸೇರಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದಿ ವೈಭವೀಕರಣ ಸಲ್ಲದು ಎಂದು ಸಿಟ್ಟು ಹೊರಹಾಕಿದರು.

ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ‘ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಆದರೆ, ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಭಾರತದಲ್ಲಿ ಯಾವ ಭಾಷೆಯೂ ಮೇಲು, ಕೀಳಲ್ಲ. ಎಲ್ಲಾ ಭಾಷೆಗಳಿಗೆ ಸಮಾನ ಆದ್ಯತೆ ಸಿಗಬೇಕು’ ಎಂದರು.

ADVERTISEMENT

ಉಪಾಧ್ಯಕ್ಷ ಆರ್ಮುಗಮ್, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಅಧ್ಯಕ್ಷ ಎಸ್.ಎಂ.ಜಾಫರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಪದಾಧಿಕಾರಿಗಳಾದ ಗುಜ್ಜಲ್ ಹುಲುಗಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ಸುವರ್ಣರತ್ನ, ವಿರೂಪಾಕ್ಷಿ, ಲತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.