ADVERTISEMENT

ಜನೌಷಧ ಕೇಂದ್ರ ಮುಚ್ಚುವುದಕ್ಕೆ ವಿರೋಧ

​ಪ್ರಜಾವಾಣಿ ವಾರ್ತೆ
Published 30 ಮೇ 2025, 14:03 IST
Last Updated 30 ಮೇ 2025, 14:03 IST
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೂಡ್ಲಿಗಿ ಮಂಡಲದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡು ಸಾರ್ವಜನಿಕ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು
ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕೂಡ್ಲಿಗಿ ಮಂಡಲದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡು ಸಾರ್ವಜನಿಕ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು   

ಕೂಡ್ಲಿಗಿ: ‘ಖಾಸಗಿ ಮೆಡಿಕಲ್ ಮಾಫಿಯಾಕ್ಕೆ ಮಣಿದಿರುವ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದೆ’ ಎಂದು ಆರೋಪಿಸಿ ಇಲ್ಲಿನ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಟ್ಟೆ ಕಟ್ಟಿಕೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸರ್ಕಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೂರ್ಯಪಾಪಣ್ಣ, ಮಂಡಲ ಅಧ್ಯಕ್ಷ ಕೆ. ನಾಗರಾಜ, ಪಟ್ಟಣ ಪಂಚಾಯಿತಿ ಸದಸ್ಯ ಕೆ.ಎಚ್.ಎಂ. ಸಚಿನ್ ಕುಮಾರ್, ಎಸ್. ದುರುಗೇಶ, ಪ್ರಧಾನ ಕಾರ್ಯದರ್ಶಿ ಪಿ. ಮಂಜುನಾಥ ನಾಯಕ, ಎಸ್ಟಿ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಗುರಿಕಾರ ರಾಘವೇಂದ್ರ, ಜಿಲ್ಲಾ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಾಣೇಹಳ್ಳಿ ಹನುಮಂತಪ್ಪ, ಮಹಿಳಾ ಮೋರ್ಚಾದ ತಾಲ್ಲೂಕು ಅಧ್ಯಕ್ಷೆ ಎಲ್. ಪವಿತ್ರಾ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.