ADVERTISEMENT

ಪರಿನಿರ್ವಾಣ ದಿನ; ಅಂಬೇಡ್ಕರ್‌ಗೆ ಗೌರವ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 12:54 IST
Last Updated 6 ಡಿಸೆಂಬರ್ 2021, 12:54 IST
ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಮುಖಂಡರು ಸೋಮವಾರ ಹೊಸಪೇಟೆಯಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಮುಖಂಡರು ಸೋಮವಾರ ಹೊಸಪೇಟೆಯಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು   

ಹೊಸಪೇಟೆ (ವಿಜಯನಗರ): ನಗರ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಸೋಮವಾರ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು. ಅದರ ವಿವರ ಇಂತಿದೆ.

ಜಿಲ್ಲಾಡಳಿತ:

ಜಿಲ್ಲಾಧಿಕಾರಿ ಅನಿರುದ್ಧ್ ಪಿ.ಶ್ರವಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಅವರು ನಗರದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ತಹಶೀಲ್ದಾರ್ ಎಚ್.ವಿಶ್ವನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ವಸಂತ್ ಕುಮಾರ್ ಇದ್ದರು.

ADVERTISEMENT

ಹಂಪಿ ಕನ್ನಡ ವಿಶ್ವವಿದ್ಯಾಲಯ:

ದಲಿತ ಅಧ್ಯಯನ ಪೀಠದಿಂದ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಸ.ಚಿ.ರಮೇಶ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ, ದಲಿತ ಅಧ್ಯಯನ ಪೀಠದ ಸಂಚಾಲಕ ವೆಂಕಟಗಿರಿ ದಳವಾಯಿ ಇದ್ದರು.

ಬ್ಲಾಕ್ ಕಾಂಗ್ರೆಸ್ ಸಮಿತಿ:

ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನ ಆಚರಿಸಿದರು. ನಂತರ ನಗರದಲ್ಲಿನ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಮುಖಂಡರಾದ ಗುಜ್ಜಲ್ ನಾಗರಾಜ, ವೀರಭದ್ರ ನಾಯಕ, ತಿಮ್ಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.