ADVERTISEMENT

ಉಪ್ಪಿನಂಗಡಿಲಿ ಪಿಎಫ್‌ಐ ಕಾರ್ಯಕರ್ತರ ಬಂಧನ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 12:40 IST
Last Updated 15 ಡಿಸೆಂಬರ್ 2021, 12:40 IST
ಪಿಎಫ್‌ಐ ಕಾರ್ಯಕರ್ತರು ಬುಧವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು
ಪಿಎಫ್‌ಐ ಕಾರ್ಯಕರ್ತರು ಬುಧವಾರ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಪಾಪುಲರ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಮುಖಂಡರ ಬಂಧನ ವಿರೋಧಿಸಿ ಕಾರ್ಯಕರ್ತರು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

‘ಉಪ್ಪಿನಂಗಡಿಯಲ್ಲಿ ಸುಳ್ಳು ಕೇಸ್‌ ಹಾಕಿ ಮುಖಂಡರನ್ನು ಬಂಧಿಸಲಾಗಿದೆ. ಅಲ್ಲದೇ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್‌ ನಡೆಸಲಾಗಿದೆ. ಇದು ತೀವ್ರ ಖಂಡನಾರ್ಹ’ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದರು.

‘ಸಂಘಟನೆಯ ಇಬ್ಬರು ಮುಖಂಡರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಅಮಾಯಕರನ್ನು ಸುಳ್ಳು ಕೇಸಿನಲ್ಲಿ ಸಿಲುಕಿಸುವ ಹುನ್ನಾರ ಅಡಗಿದೆ. ಲಾಠಿಚಾರ್ಜ್‌ ನಡೆಸಿದ ಠಾಣೆಯ ಅಧಿಕಾರಿ, ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.