ADVERTISEMENT

ವಿಜಯನಗರ: ಶೇ 5ರಷ್ಟು ಮೀಸಲಾತಿಗೆ ಅಂಗವಿಕಲರ ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 13:12 IST
Last Updated 21 ಫೆಬ್ರುವರಿ 2022, 13:12 IST
ವಿಕಲಚೇತನ ಸಂಘದವರು ಸೋಮವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಮನವಿ ಸಲ್ಲಿಸಿದರು
ವಿಕಲಚೇತನ ಸಂಘದವರು ಸೋಮವಾರ ಹೊಸಪೇಟೆ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪೌರಾಯುಕ್ತ ಮನ್ಸೂರ್‌ ಅಲಿ ಅವರಿಗೆ ಮನವಿ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ನಗರಸಭೆಯ ವಿವಿಧ ಯೋಜನೆಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಮೀಸಲಾತಿ ಒದಗಿಸಬೇಕೆಂದು ವಿಕಲಚೇತನರ ಸಂಘ ಆಗ್ರಹಿಸಿದೆ.

ಈ ಸಂಬಂಧ ಸೋಮವಾರ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಅಂಗವಿಕಲರ ಸಂಘದ ನಗರ ಘಟಕದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದರು.

ಅಂಗವಿಕಲರಿಗೆ ಸ್ವ ಉದ್ಯೋಗ ಕೈಗೊಳ್ಳಲು ನಗರಸಭೆ ಅನುದಾನ ಮೀಸಲಿಡಬೇಕು. ಜೊತೆಗೆ ಸಬ್ಸಿಡಿ ಕೂಡ ನೀಡಬೇಕು. ವಿವಿಧ ಯೋಜನೆಗಳಲ್ಲಿ ಅಂಗವಿಕಲರಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಅಧ್ಯಕ್ಷ ಟಿ.ಲೋಹಿತ್, ಉಪಾಧ್ಯಕ್ಷ ಶೇಕ್ ಮೆಹಬೂಬ್ ಬಾಷ, ಎನ್.ವೆಂಕಟೇಶ್, ಪಾಂಡು ನಾಯ್ಕ, ಲಕ್ಷ್ಮಿ, ಶಮೀನಾ, ಬಷೀರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.