ADVERTISEMENT

ಹೂವಿನಹಡಗಲಿ: ಮೈಲಾರ ಚೆಕ್ ಪೋಸ್ಟ್‌ನಲ್ಲಿ ₹2.50 ಲಕ್ಷ ನಗದು ವಶ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 14:42 IST
Last Updated 1 ಏಪ್ರಿಲ್ 2023, 14:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮೈಲಾರ ಗ್ರಾಮದ ಚೆಕ್ ಪೋಸ್ಟ್ ಬಳಿ ಶನಿವಾರ ಚುನಾವಣಾ ಸಿಬ್ಬಂದಿ ₹2.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಚೆಕ್ ಪೋಸ್ಟ್ ಸಿಬ್ಬಂದಿ ಗುತ್ತಲ ಕಡೆಯಿಂದ ಬರುತಿದ್ದ ಕಾರು ತಡೆದು ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ಇದಕ್ಕೆ ದಾಖಲೆ ಇಲ್ಲದ್ದರಿಂದ ನಗದು ವಶಪಡಿಸಿಕೊಳ್ಳಲಾಗಿದೆ.

ಹಿರೇಕೆರೂರು ತಾಲ್ಲೂಕು ಮಡ್ಲೂರಿನ ಮಹಾದೇವ ಎಂಬುವವರು ಮಾಗಳ ಗ್ರಾಮದ ಕೆ.ಹುಸೇನ್ ಸಾಬ್ ಎಂಬುವವರಿಗೆ ನೀಡಲು ನಗದು ಕೊಂಡೊಯ್ಯುತ್ತಿದ್ದರು. ಚೆಕ್ ಪೋಸ್ಟ್ ಸಿಬ್ಬಂದಿ ಮಾಹಿತಿ ಮೇರೆಗೆ ಜಾಗೃತ ದಳ ಅಧಿಕಾರಿ ಎಸ್.ಎಸ್.ಪ್ರಕಾಶ್ ಸ್ಥಳಕ್ಕೆ ಭೇಟಿ ನೀಡಿ ನಗದು ವಶಪಡಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.