ADVERTISEMENT

ಖಾಸಗೀಕರಣ ವಿರೋಧಿಸಿ ಅಂಚೆ ನೌಕರರ ಧರಣಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 14:05 IST
Last Updated 10 ಆಗಸ್ಟ್ 2022, 14:05 IST
ಖಾಸಗೀಕರಣ ವಿರೋಧಿಸಿ ಅಂಚೆ ನೌಕರರು ಬುಧವಾರ ಹೊಸಪೇಟೆ ಪ್ರಧಾನ ಅಂಚೆ ಕಚೇರಿ ಎದುರು ಧರಣಿ ನಡೆಸಿದರು
ಖಾಸಗೀಕರಣ ವಿರೋಧಿಸಿ ಅಂಚೆ ನೌಕರರು ಬುಧವಾರ ಹೊಸಪೇಟೆ ಪ್ರಧಾನ ಅಂಚೆ ಕಚೇರಿ ಎದುರು ಧರಣಿ ನಡೆಸಿದರು   

ಹೊಸಪೇಟೆ (ವಿಜಯನಗರ): ಖಾಸಗೀಕರಣ ವಿರೋಧಿಸಿ ಅಂಚೆ ನೌಕರರು ಬುಧವಾರ ನಗರದ ಪ್ರಧಾನ ಅಂಚೆ ಕಚೇರಿ ಎದುರು ಧರಣಿ ನಡೆಸಿದರು.

ಖಾಸಗೀಕರಣ ಪ್ರಕ್ರಿಯೆ ಕೂಡಲೇ ಕೈಬಿಡಬೇಕು. ಹೊಸ ಪಿಂಚಣಿ ಯೋಜನೆಯನ್ನು ನಿಲ್ಲಿಸಿ, ಹಳೆ ಪಿಂಚಣಿ ಯೋಜನೆಯನ್ನೇ ಮುಂದುವರೆಸಬೇಕು. ಗ್ರಾಮೀಣ ಅಂಚೆ ನೌಕರರಿಗೆ ನಾಗರಿಕ ಸೇವಕ ಸ್ಥಾನಮಾನ ನೀಡಿ ಅವರ ಸೇವೆ ಕಾಯಂಗೊಳಿಸಬೇಕು. ಬಡ್ತಿಗೆ ರೂಪಿಸಿರುವ ಹೊಸ ನಿಯಮ ಹಿಂಪಡೆಯಬೇಕು. ಎಂಟನೇ ಕೇಂದ್ರ ವೇತನ ಆಯೋಗ ಮತ್ತು ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಹೊಸಪೇಟೆ ಶಾಖೆಯ ಕಾರ್ಯದರ್ಶಿ ಎಲ್.ಎಸ್. ಸುರೇಶ್ ಕುಮಾರ್, ಅಂಚೆ ಕಚೇರಿಯ ಅಂಚೆ ಪಾಲಕರಾದ ಕೆ.ಕೊಟ್ರೇಶಪ್ಪ, ಹಾಲೇಶ್, ಹೊಸಪೇಟೆ ಶಾಖೆ ಅಧ್ಯಕ್ಷ ಎಂ. ರಾಮರಾವ್‌, ಬಿ. ಪಾಲಯ್ಯ, ಖಜಾಂಚಿ ವಿ.ಎಸ್. ಕೃಷ್ಣ, ಪೋಸ್ಟ್ ಮ್ಯಾನ್ ಸಂಘದ ಅಧ್ಯಕ್ಷ ಶಿವಕುಮಾರ್ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.