
ಪ್ರಜಾವಾಣಿ ವಾರ್ತೆ
ಹರಪನಹಳ್ಳಿ (ವಿಜಯನಗರ ಜಿಲ್ಲೆ): ಬಾಂಗ್ಲಾದೇಶ ತಂಡದ ಜತೆ ಕ್ರಿಕೆಟ್ ಆಡುವುದನ್ನು ಬಿಸಿಸಿಐ ನಿಲ್ಲಿಸಬೇಕು. ಭಾರತದಿಂದ ಬಾಂಗ್ಲಾದೇಶಕ್ಕೆ ಎಲ್ಲಾ ರಫ್ತು ಸ್ಥಗಿತಗೊಳಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.
ತಾಲ್ಲೂಕಿನ ಕುಮಾರನಹಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ ತಂಡದ ಜತೆ ಭಾರತದಲ್ಲಿ ಎಲ್ಲೇ ಪಂದ್ಯ ನಡೆದರೂ ಶ್ರೀರಾಮಸೇನೆಯ ಕಾರ್ಯಕರ್ತರು ಮೈದಾನಕ್ಕೆ ತೆರಳಿ ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಸಿದರು.
‘ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯನ್ನು ಶ್ರೀರಾಮಸೇನೆ ಖಂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಮುಚ್ಚಿಕೊಂಡಿರುವುದು ಸರಿಯಲ್ಲ. ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ 5 ಲಕ್ಷ ಬಾಂಗ್ಲಾದೇಶದ ಜನರನ್ನು ಹೊರಹಾಕಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.